ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಜಪಡೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶೇಷ ಪೂಜೆ
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ […]