ದಸರಾ ಜಂಬೂ ಸವಾರಿ ಮೆರವಣಿಗೆ: ಹೆಗ್ಗುಂಜೆ ಜಾನಪದ ಕಲಾ ಸಂಘಕ್ಕೆ ಪ್ರಥಮ ಸ್ಥಾನ

ಉಡುಪಿ: ದಸರಾ ಮಹೋತ್ಸವ 2023 ರ ಅಂಗವಾಗಿ ಅಕ್ಟೋಬರ್ 24 ರಂದು ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಜಿಲ್ಲೆಯ ಸಿ. ಚಂದ್ರನಾಯ್ಕ್ ನೇತೃತ್ವದ ಹೆಗ್ಗುಂಜೆ ಶ್ರೀ ಮಲ್ಲಿಕಾರ್ಜುನ ಕುಡುಬಿ ಹೋಳಿ ಜಾನಪದ ಕಲಾಸಂಘವು ಗುಮಟೆ ನೃತ್ಯ ಪ್ರದರ್ಶಿಸಿ, ಪ್ರಥಮ ಸ್ಥಾನ ಪಡೆದು 15,000 ರೂ. ನಗದು ಬಹುಮಾನ ಪಡೆದಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿನ್ನದ ಅಂಬಾರಿ ಹೊತ್ತು ಸಾಗುತ್ತಿದ್ದ ಗಜರಾಜ ಬಲರಾಮನಿಗೆ ಭಾವಪೂರ್ಣ ವಿದಾಯ

ಮೈಸೂರು: ನಾಡ‌ದೇವತೆ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಜಗಾಂಭೀರ್ಯದಿಂದ ಸಾಗುತ್ತಿದ್ದ ಬಲರಾಮ (67) ಅಸೌಖ್ಯದಿಂದಾಗಿ ಸಾವನ್ನಪ್ಪಿದ್ದಾನೆ. ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿಯನ್ನು ಹೊತ್ತ ಕೀರ್ತಿ ಹೊಂದಿರುವ ಸೌಮ್ಯ ಸ್ವಭಾವದ ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ದ ಕಾರಣ ಕಳೆದ ಹತ್ತು ದಿನಗಳಿಂದ ಆತ ನೋವಿನಿಂದ ಬಳಲುತ್ತಿದ್ದ ಮತ್ತು ಆತನಿಗೆ ಆಹಾರ ಸೇವಿಸಲಾಗುತ್ತಿರಲಿಲ್ಲ. ಭಾನುವಾರದಂದು ತೀವ್ರ ಅವಸ್ಥನಾಗಿದ್ದ ಅವನನ್ನು ಕೂಡಲೇ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. […]

ಮೈಸೂರು ದಸರಾ ಆಹಾರ ಮೇಳದಲ್ಲಿ ಆಹಾರ ಮಳಿಗೆ ತೆರೆಯಲು ಅಡುಗೆ ತಯಾರಕರಿಗೆ ಆಹ್ವಾನ

ಉಡುಪಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 26 ರಿಂದ ಅಕ್ಟೋಬರ್ 5 ರ ವರೆಗೆ ನಡೆಯಲಿದ್ದು, ದಸರಾ ಅಂಗವಾಗಿ ಜನಪ್ರಿಯ ಆಹಾರ ಮೇಳವನ್ನು ಸೆ. 26 ರಿಂದ ಅ.3 ರ ವರೆಗೆ ಮೈಸೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಸಮೀಪದ ಮೂಡಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಆಹಾರ ಮೇಳಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಶೈಲಿಯ ಉಟೋಪಚಾರ ತಯಾರಿಸುವ ಆಹಾರ ಮಳಿಗೆ ತೆರೆಯಲು ಹೋಟೆಲ್, ಕೇಟರರ್ಸ್, […]