ಕಾಡಾನೆ ದಾಳಿಗೆ ರೈತ ಬಲಿ, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪರಿಶೀಲನೆ :ಮೈಸೂರು

ಮೈಸೂರು: ಜಿಲ್ಲೆಯಲ್ಲಿ ಮಾನವ-ಕಾಡುಪ್ರಾಣಿಗಳ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಗುರುವಾರ ಸರಗೂರು ತಾಲೂಕಿನ ನಡಹಾಡಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.ಕಾಡಾನೆ ದಾಳಿಗೆ ರೈತ ಸಾವಿಗೀಡಾಗಿರುವ ಘಟನೆ ಮೈಸೂರಿನ ಸರಗೂರು ತಾಲೂಕಿನ ನಡಹಾಡಿ ಗ್ರಾಮದಲ್ಲಿ ನಡೆದಿದೆ. ಪದೇ ಪದೇ ಕಾಡು ಪ್ರಾಣಿಗಳ ದಾಳಿಯಿಂದ ಗ್ರಾಮಸ್ಥರು ನಲುಗಿ ಹೋಗಿದ್ದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೇಗೌಡರ ಕುಟುಂಬಕ್ಕೆ ಪರಿಹಾರ ನೀಡುವಂತೆ ಅರಣ್ಯ ಇಲಾಖೆಯನ್ನು ಆಗ್ರಹಿಸಿದರು. ಡಿವೈಎಸ್ಪಿ ಗೋಪಾಲಕೃಷ್ಣ, ಸರ್ಕಲ್ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತ್ ಸ್ಥಳದಲ್ಲಿದ್ದರು.ರೈತ ಚಿಕ್ಕೇಗೌಡ ಮೃತಪಟ್ಟಿದ್ದಾರೆ. ಬೆಳಿಗ್ಗೆ ತಮ್ಮ ಜಮೀನಿನ […]