ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಇಬ್ಬರಿಂದ ಯುವತಿ ಮೇಲೆ ಅತ್ಯಾಚಾರ

ಮೈಸೂರು: ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. ಪಬ್ ವೊಂದರಲ್ಲಿ ಭೇಟಿಯಾದ ಇಬ್ಬರು ವ್ಯಕ್ತಿಗಳು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದಾಗಿ ವರದಿಯಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಗರದ ಪಬ್ ವೊಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಆಕೆಗೆ ಆಮಿಷವೊಡ್ಡುವ ಮೂಲಕ ಪ್ರತ್ಯೇಕ ಸ್ಥಳವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. 2021 ರ ಆಗಸ್ಟ್ 24 […]