ಮೈಸೂರಿನ ಕುಟುಂಬ ಮಂಗಳೂರಿನಲ್ಲಿ ಆತ್ಮಹತ್ಯೆ
ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಮೈಸೂರಿನಿಂದ ಬಂದಿದ್ದರೆನ್ನಲಾದ ಒಂದೇ ಕುಟುಂಬದ ನಾಲ್ವರು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ದೇವೇಂದ್ರ (48), ನಿರ್ಮಲಾ (38) ಮತ್ತು 9 ವರ್ಷದ ಅವಳಿ ಹೆಣ್ಣು ಮಕ್ಕಳಾದ ಚೈತ್ರ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ. ಕುಟುಂಬವು ಮಾರ್ಚ್ 27 ರಂದು ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿತ್ತು ಮತ್ತು ಮಾರ್ಚ್ 30 ರಂದು ಖಾಲಿಮಾಡಬೇಕಾಗಿತ್ತು. ಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಹಾಗೂ ಇಬ್ಬರು […]
ಸಾಹಸಸಿಂಹ ಕನ್ನಡ ಚಿತ್ರ ರಸಿಕರ ನೆಚ್ಚಿನ ನಟ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ
ಮೈಸೂರು: ಇಲ್ಲಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಿರುವ ಡಾ.ವಿಷ್ಣುವರ್ಧನ್ ಸ್ಮಾರಕ ಭವನದ ಉದ್ಘಾಟನೆಯು ಭಾನುವಾರ ನಡೆಯಿತು. ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸ್ವಭಾವತಃ ಭಾವುಕ ಹಾಗೂ ಮಾನವೀಯತೆಯ ಗುಣಗಳುಳ್ಳ ಜೀವಿಯಾಗಿದ್ದ ವಿಷ್ಣುವರ್ಧನ್, ತೆರೆಯ ಮೇಲಿನ ಅವರ ಚಿತ್ರಗಳಲ್ಲಿಯೂ ಸಹ ಅದೇ ಗುಣಗಳುಳ್ಳ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮಾನವೀಯತೆಯ ಗುಣಗಳನ್ನು ತುಂಬಿದ್ದ ಯಜಮಾನರಾಗಿರಾದ್ದರು. ಅವರು ಸ್ಮಾರಕ ವಿಚಾರದಲ್ಲಿ ಹಲವಾರು ಅಡೆತಡೆಗಳು ಬಂದರೂ, ಕೊನೆಗೂ ವಿಷ್ಣುವರ್ಧನ್ ರವರ ಹುಟ್ಟೂರು ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಗೊಂಡು ಲೋಕಾರ್ಪಣೆಯಾಗಿರುವುದು ಸಂತಸದ ಸಂಗತಿಯಾಗಿದೆ ಎಂದರು. […]
ಜನವರಿ 29ರಂದು ಮೈಸೂರಿನಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಸ್ಮಾರಕ ಉದ್ಘಾಟನೆ
ಮೈಸೂರು: ಇಲ್ಲಿನ ಎಚ್.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ಡಾ.ವಿಷ್ಣುವರ್ಧನ್ ಅವರ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಚಿತ್ರನಟ ಅನಿರುದ್ದ್ ಹೇಳಿದ್ದಾರೆ. ‘ಸಾಹಸ ಸಿಂಹ’ ಡಾ.ವಿಷ್ಣವರ್ಧನ್ ರವರ ಸ್ಮಾರಕದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಲಿದ್ದಾರೆ.ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಅನಿರುದ್ಧ್ ಹೇಳಿದ್ದಾರೆ.
ಮೈಸೂರು ಮತ್ತು ಚೆನ್ನೈ ನಡುವೆ ಚಲಿಸುವ ದಕ್ಷಿಣ ಭಾರತ ಪ್ರಥಮ ವಂದೇ ಭಾರತ್ ರೈಲು ಇಂದು ಉದ್ಘಾಟನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಿಂದ ಭಾರತದ ಐದನೇ ವಂದೇ ಭಾರತ್‌ಗೆ ಚಾಲನೆ ನೀಡಲಿದ್ದು, ಇದು ದಕ್ಷಿಣದ ಮೊದಲ ಸೆಮಿ-ಹೈ-ಸ್ಪೀಡ್ ರೈಲಾಗಿದೆ. ರೈಲು ಮೈಸೂರು ಮತ್ತು ಚೆನ್ನೈ ನಡುವೆ ಚಲಿಸಲಿದ್ದು, ಈ ಮಾರ್ಗದ ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಸಹಾಯ ಮಾಡುತ್ತದೆ. ವಂದೇ ಭಾರತ್ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಉದ್ಘಾಟನೆಗೊಂಡು ನಂತರ ಚೆನ್ನೈಗೆ ಆಗಮಿಸಲಿದೆ. ಹೊಸ ವಂದೇ ಭಾರತ್ ರೈಲಿನ ಪ್ರಮುಖ ಅಂಶಗಳು: ಚೆನ್ನೈನಿಂದ ಮೈಸೂರಿಗೆ ಪ್ರಯಾಣಿಸುವ ಪ್ರಯಾಣಿಕರು ಕಾರ್ ಕುರ್ಚಿಗೆ 1,200 ರೂ ಮತ್ತು […]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲದಿಂದ ವಿವಿಧ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್.ಸ್ಸಿ, ಎಂ.ಎಸ್ಸಿ ಪದವಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksoumysuru.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ಕಲಿಕಾರ್ಥಿ ಸಹಾಯ […]