ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಅರಮನೆ ಮೈದಾನದಲ್ಲಿ ಪುನೀತ ಪರ್ವ: ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸುವ ನಿರೀಕ್ಷೆ

ಅಪ್ಪು ಕಣ್ಮರೆಯಾಗಿ ಒಂದು ವರ್ಷವಾಗುತ್ತಾ ಬಂದಿದ್ದು, ಅವರ ಪುಣ್ಯ ಸ್ಮರಣೆಯ ಒಂದು ದಿನಕ್ಕೂ ಮುನ್ನ ಅಕ್ಟೋಬರ್‌ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನೈಜ ಜೀವನದ ಪುನೀತ್ ರಾಜ್‍ಕುಮಾರ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ  ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಬಿಡುಗಡೆ ಪೂರ್ವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ. ಈ ಪುನೀತ ಪರ್ವ ಕಾರ್ಯಕ್ರಮಕ್ಕೆ […]

ಭಾರತ್ ಜೋಡೋ ಯಾತ್ರೆ: ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರು ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‌ನಲ್ಲಿ ತಂಗಲಿದ್ದಾರೆ ಎನ್ನಲಾಗಿದೆ. ಮೈಸೂರು ಭಾಗದ ಯಾತ್ರೆ ಮುಗಿಸಿ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಅಕ್ಟೋಬರ್ 6 ರಂದು ಭಾರತ್ ಜೋಡೋ ಯಾತ್ರೆಯನ್ನು […]

ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://puucms.karnataka.gov.in, https://www.cavamysore.karnataka.gov.in ಸಹಾಯವಾಣಿ 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಶೈಕ್ಷಣಿಕ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸ್ಯಾಟ್‍ಕಾಮ್’ ತರಬೇತಿ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ಜೀವವೈವಿಧ್ಯ ಮಂಡಳಿಯು ರಾಜ್ಯದ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳ ಜೀವವೈವಿಧ್ಯ ನಿರ್ವಹಣಾ ಸಮಿತಿಗಳನ್ನು ಕಾರ್ಯಪ್ರವೃತ್ತಿಗೊಳಿಸಲು, ಅಬ್ದುಲ್ ನಜೀರ್‍ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು (SATCOM) ಮುಖಾಂತರ ‘ಸ್ಯಾಟ್‍ಕಾಮ್’ ತರಬೇತಿ ಕಾರ್ಯಕ್ರಮವನ್ನು ಜೂ.20ರಂದು ಆಯೋಜಿಸಲಾಯಿತು. ತರಬೇತಿ ಕಾರ್ಯಕ್ರಮವನ್ನು 139 ತಾಲ್ಲೂಕುಗಳಲ್ಲಿ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳ ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯರುಗಳಿಗೆ, ಚುನಾಯಿತ ಅಧಿಕಾರಿಗಳಿಗೆ, ನಾಟಿವೈದ್ಯರುಗಳಿಗೆ ಮತ್ತು ಇಲಾಖಾ ಅಧಿಕಾರಿಗಳಿಗೆ ಹಮ್ಮಿಕೊಳ್ಳಲಾಯಿತು. ತರಬೇತುದಾರರ ತರಬೇತಿ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಭಾಗವಹಿಸಿದ್ದವರನ್ನು […]

ಕುಸಿದು ಬಿದ್ದು ಕೆ.ಎಸ್. ಭಗವಾನ್ ಆಸ್ಪತ್ರೆಗೆ ದಾಖಲು

ಮೈಸೂರು: ಹಿರಿಯ ಸಾಹಿತಿ ಪ್ರೊ.ಕೆ.ಎಸ್ ಭಗವಾನ್ ಅವರು ಕುಸಿದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ಅವರು ಏಕಾಏಕಿ‌ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.