ಮೈಸೂರು: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ; 1 ಕೋಟಿ ವಶ
ಮೈಸೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯೋಗವು ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ, ಅಕ್ರಮ ಹಣದ ಕಂತೆ ಕಂತೆಗಳು ಎಗ್ಗಿಲ್ಲದೆ ಅತ್ತಿಂದಿತ್ತ ಚಲಿಸುತ್ತಿವೆ. ಇದೀಗ ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಒಂದು ಕೋಟಿ ರೂಪಾಯಿ ವಶಪಡಿಸಿಕೊಂಡಿದೆ. ಸುಬ್ರಮಣ್ಯ ರೈ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರನಾಗಿದ್ದಾರೆ. ಕಳೆದ ಕೆಲವು ವಾರಗಳಿಂದ ಐಟಿ ಇಲಾಖೆಯು ಕರ್ನಾಟಕದಲ್ಲಿ ಚುನಾವಣಾ ಸರಮಾಲೆಯ ದಾಳಿಗಳನ್ನು ನಡೆಸಿದೆ. ಹುಬ್ಬಳ್ಳಿ, ಬೆಂಗಳೂರು, ಮೈಸೂರು ಹಾಗೂ ದಕ್ಷಿಣ […]
ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಉಡುಪಿ ಪ್ರಾದೇಶಿಕ ಕೇಂದ್ರ ವ್ಯಾಪ್ತಿಯ ನಗರ ಮತ್ತು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ವೆಬ್‌ಸೈಟ್ www.ksoumysuru.ac.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820- 2522247, 9972526647 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.