ಭ್ರಷ್ಟಾಚಾರ ಆರೋಪ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ
ಹೈದರಾಬಾದ್: ನಾಟಕೀಯ ಬೆಳವಣಿಗೆಯಲ್ಲಿ, ಆಂಧ್ರ ಪ್ರದೇಶದ ಸಿಐಡಿ ಪೊಲೀಸರು ಸೆಪ್ಟೆಂಬರ್ 9 ರಂದು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಕರ್ನೂಲ್‌ನಿಂದ 65 ಕಿಮೀ ದೂರದಲ್ಲಿರುವ ನಂದ್ಯಾಲ್‌ನಲ್ಲಿ ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್‌ನಲ್ಲಿನ ಭ್ರಷ್ಟಾಚಾರದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೊಲೀಸರು ಶುಕ್ರವಾರ ಮಧ್ಯರಾತ್ರಿಯಿಂದಲೇ ಕರ್ನೂಲ್, ನಂದ್ಯಾಲ್ ಮತ್ತು ಅನಂತಪುರ ಜಿಲ್ಲೆಗಳಿಂದ ಹಲವಾರು ಬಸ್‌ಗಳಲ್ಲಿ ಭಾರಿ ಪೊಲೀಸ್ ಪಡೆಗಳನ್ನು ನಿಯೋಜಿಸಲು ಪ್ರಾರಂಭಿಸಿದ್ದರು. ಸುಮಾರು 5.00 ಗಂಟೆಗೆ […]