ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ನೂತನ ಪೊಲೀಸ್ ಕಮಿಷನರ್
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶಶಿ ಕುಮಾರ್ ಬದಲಿಗೆ ಕುಲದೀಪ್ ಕುಮಾರ್ ಆರ್ ಜೈನ್ ಐಪಿಎಸ್ (ಕೆಎನ್-2011) ನೂತನ ಕಮಿಷನರ್ ಆಗಿ ನೇಮಕಗೊಳ್ಳಲಿದ್ದಾರೆ. ಕುಲದೀಪ್ ಕುಮಾರ್ ಆರ್ ಜೈನ್ ಪ್ರಸ್ತುತ ಬೆಂಗಳೂರು ನಗರ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್ ಅವರನ್ನು ವರ್ಗಾವಣೆ ಮಾಡಿ ಫೆ.23ರಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ರೈಲ್ವೇ ಉಪ […]
ಸುರತ್ಕಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ: ಎನ್. ಶಶಿಕುಮಾರ್
ಸುರತ್ಕಲ್: ಡಿಸೆಂಬರ್ 24 ರಂದು ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೋಮವಾರದಂದು ತಿಳಿಸಿದ್ದಾರೆ. ಬಂಧಿತರನ್ನು ಕೃಷ್ಣಾಪುರದ ಶೈಲೇಶ್ ಪೂಜಾರಿ (21), ಹೆಜಮಾಡಿಯ ಸವಿನ್ ಕಾಂಚನ್ (24) ಮತ್ತು ಕಾಟಿಪಳ್ಳದ ಪವನ್ ಅಲಿಯಾಸ್ ಪಚ್ಚು (23) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಲೀಲ್ ಅವರ ಫ್ಯಾನ್ಸಿ ಸ್ಟೋರ್ ಬಳಿ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಅವರನ್ನು ಇರಿದಿದ್ದಾರೆ. ಇಬ್ಬರು ಹತ್ಯೆಕೋರರನ್ನೂ ಮತ್ತು ಚೂರಿ ಇರಿತದ ನಂತರ ವರಿಗೆ ಪರಾರಿಯಾಗಲು […]
ಸುರತ್ಕಲ್ ಹತ್ಯೆ ಪ್ರಕರಣ: ವಿಚಾರಣೆಗಾಗಿ 5 ಮಂದಿಯನ್ನು ವಶಕ್ಕೆ ಪಡೆದ ನಗರ ಪೊಲೀಸರು
ಸುರತ್ಕಲ್: ಇಲ್ಲಿನ ಕೃಷ್ಣಾಪುರ-ಕಾಟಿಪಳ್ಳದಲ್ಲಿ ಜಲೀಲ್ ಎನ್ನುವ ವ್ಯಕ್ತಿಯನ್ನು ಅವರ ಅಂಗಡಿಯಯಲ್ಲೇ ಚೂರಿ ಇರಿದು ಹತ್ಯೆ ಮಾಡಲಾದ ಪ್ರಕರಾಣದಲ್ಲಿ ತನಿಖೆ ಚುರುಕುಗೊಂಡಿದೆ. ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿರುವ ಫ್ಯಾನ್ಸಿ ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ (45) ಅವರ ಅಂಗಡಿ ಬಳಿ ಶನಿವಾರ ರಾತ್ರಿ ನಡೆದ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ನಾವು ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರನ್ನು ವಿಚಾರಣೆಗಾಗಿ ನಮ್ಮ ವಶಕ್ಕೆ […]
ಮಂಗಳೂರು: ಆಗಸ್ಟ್ 5ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಮಂಗಳೂರು: ದ.ಕ ವ್ಯಾಪ್ತಿಯಲ್ಲಿ ಬೆನ್ನು ಬೆನ್ನಿಗೆ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ, ಕರಾವಳಿ ಜಿಲ್ಲೆಯು ಕುದಿಯುವ ಬಾಣಲೆಯಂತಾಗಿದ್ದು, ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಮಂಗಳೂರು ನಗರ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಆಗಸ್ಟ್ 1 ರವರೆಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5ರ ಸಂಜೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಿಷೇಧಾಜ್ಞೆ ಸಂದರ್ಭದಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವಂತಿಲ್ಲ. ಚೇಷ್ಟೆ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಕ್ರಿಯೆಯನ್ನು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ. ನಿಷೇಧಿತ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ […]