ಅಕ್ಷಯ್ ಹಾಕೆ ಮಚ್ಚಿಂದ್ರ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ: ಎನ್.ವಿಷ್ಣುವರ್ಧನ್ ಗುಪ್ತಚರ ಇಲಾಖೆಗೆ ವರ್ಗಾವಣೆ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರು ಬೆಂಗಳೂರಿನ ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, 2015ರ ಐಪಿಎಸ್ ಬ್ಯಾಚಿನ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.