ಸಂಸತ್ತಿನಲ್ಲಿ ಪ್ರಧಾನಿ ಮೋದಿ ಧರಿಸಿದ್ದು ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆಯಿಂದ ಮಾಡಿದ ಜಾಕೆಟ್!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿನಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತುಗಳಿಂದ ತಯಾರಿಸಿದ ತೋಳಿಲ್ಲದ ಜಾಕೆಟ್ ಧರಿಸಿದ್ದರು. ಬುಧವಾರ ಲೋಕಸಭೆಯಲ್ಲಿ ಪ್ರಧಾನಿಯವರು ತಿಳಿ ನೀಲಿ ಬಣ್ಣದ “ಸದ್ರಿ” ಜಾಕೆಟ್ ಧರಿಸಿ ಬಂದಿದ್ದರು. ಮೋದಿ ಧರಿಸಿರುವ ಈ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ಮಾಡಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್‌ನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅವರು ಕಂಪನಿಯ “ಅನ್‌ಬಾಟಲ್ಡ್” ಉಪಕ್ರಮದ ಅಡಿಯಲ್ಲಿ ಸಮವಸ್ತ್ರವನ್ನು ಬಿಡುಗಡೆ […]