ಮಂಗಳೂರು: ಪ್ಲಾಸ್ಟಿಕ್ ವಸ್ತುಗಳ ಮಾರಾಟ; ಅಧಿಕಾರಿಗಳಿಂದ ದಾಳಿ

ಮಂಗಳೂರು: ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.   ಮಂಗಳೂರು ನಗರದ ಸೆಂಟ್ರಲ್ ಸಿಟಿ ಮಾರ್ಕೆಟ್ ನ ಹಲವು ಅಂಗಡಿಗಳ ಮೇಲೆ ಮನಪಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕಾನೂನು ಬಾಹಿರವಾಗಿ ಮಾರಾಟ ಮಾಡಲು ದಾಸ್ತಾನಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಸಾಮಾಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಅಧಿಕಾರಿಗಳು ವಿವಿಧ ಭಾಗಗಳಲ್ಲಿ ಹೆಚ್ಚಿನ ತನಿಖೆ ನಡೆಸಲಿದ್ದಾರೆ.