ನಗರಸಭೆಯ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ ನೀಡಿದ ಶಾಸಕ ರಘುಪತಿ ಭಟ್

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಗೆ ಫ್ರಂಟ್ ಆಂಡ್ ಬ್ಯಾಕ್ ಲೋಡರ್ ವಾಹನ ಹಾಗೂ ನಾಲ್ಕು ಟಿಪ್ಪರ್ ಮಂಜೂರಾಗಿದ್ದು, ಶಾಸಕ ಕೆ ರಘುಪತಿ ಭಟ್ ನಗರಸಭೆಯ ಮುಂಭಾಗದಲ್ಲಿ ವಾಹನಗಳಿಗೆ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ನಗರಸನ್ಹೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯ್ ಶೆಟ್ಟಿ, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.  

ನಗರಸಭೆ: ಜುಲೈ 16 ರಂದು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಹಲ್ಲೆ ಆರೋಪಿ‌ ಯೋಗೀಶ್ ಸಾಲ್ಯಾನ್ ಬಿಜೆಪಿಯಿಂದ ಅಮಾನತು

ಉಡುಪಿ: ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಬಿಜೆಪಿ ಪಕ್ಷದ, ವಡಾಭಾಂಡೇಶ್ವರ ನಗರಸಭಾ ಸದಸ್ಯ ಯೊಗೀಶ್ ಸಾಲ್ಯಾನ್ ಅವರನ್ನು ಮಂಗಳವಾರ ಬಿಜೆಪಿಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ‌ ಜಿಲ್ಲಾಧ್ಯಕ್ಷ ಮಟ್ಟಾರು‌ ರತ್ನಾಕರ ಹೆಗ್ಡೆ ಅವರು, ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿರುವ ಕ್ರಮ ಖಂಡನೀಯ. ಬಿಜೆಪಿ ಪಕ್ಷ ಇಂಥ ವಿಚಾರ ಸಹಿಸುವುದಿಲ್ಲ. ಆರೋಪಿತರ ವಿರುದ್ದ ಪಕ್ಷದ ವತಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದರು. ಘಟನೆ ಹಿನ್ನೆಲೆ: ಮಂಗಳವಾರ ಉಡುಪಿ […]

ಉಡುಪಿ: ಆರೋಗ್ಯ ನಿರೀಕ್ಷಕರ ಮೇಲೆ ನಗರಸಭೆ ಸದಸ್ಯನಿಂದ ಹಲ್ಲೆ

ಉಡುಪಿ: ಉಡುಪಿ ನಗರಸಭೆ ಸದಸ್ಯರೊಬ್ಬರು ನಗರಸಭೆ ಆರೋಗ್ಯ ನಿರೀಕ್ಷಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆಸಿದೆ. ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್​ ಹಲ್ಲೆಗೆ ಒಳಗಾದವರು. ಉಡುಪಿ ನಗರಸಭೆಯ ವಡಭಾಂಡೇಶ್ವರ ವಾರ್ಡ್​ನ ಸದಸ್ಯ ಯೋಗೀಶ್​ ಹಲ್ಲೆ ಮಾಡಿದವರು. ಹಲ್ಲೆಗೆ ಒಳಗಾಗಿರುವ ಆರೋಗ್ಯ ನಿರೀಕ್ಷಕರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸ್ಪತ್ರೆ ಬಳಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಡಭಾಂಡೇಶ್ವರ ಪರಿಸರದಲ್ಲಿ ರಸ್ತೆಯ ಕಲ್ಲು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಕಚೇರಿಗೆ […]