ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ನಾಗ್ಪುರ (ಮಹಾರಾಷ್ಟ್ರ): ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಆರೋಗ್ಯ ಹಠಾತ್ ಹದಗೆಟ್ಟು ತೀವ್ರ ತೊಂದರೆ ಎದುರಾದ ಹಿನ್ನೆಲೆಯಲ್ಲಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮುಂಬೈ – ರಾಂಚಿ ಇಂಡಿಗೋ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಅವರು ಮೃತಪಟ್ಟಿದ್ದಾರೆ. ಮುಂಬೈನಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ರಕ್ತ ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ತುರ್ತು ಲ್ಯಾಂಡಿಂಗ್ ಅನಿವಾರ್ಯವಾಯಿತು. ಪ್ರಯಾಣಿಕನನ್ನು ದೇವಾನಂದ್ ತಿವಾರಿ ಎಂದು ಗುರುತಿಸಲಾಗಿದ್ದು, […]