ನಾಗ್ಪುರ : 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳಲ್ಲಿ 25 ರೋಗಿಗಳ ಸಾವು

ನಾಗ್ಪುರ (ಮಹಾರಾಷ್ಟ್ರ): ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಮೇಯೊ) ಯಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 16 ರೋಗಿಗಳು ಹಾಗೂ ಮೇಯೊ ಆಸ್ಪತ್ರೆಯಲ್ಲಿ 9 ರೋಗಿಗಳು ಸಾವನ್ನಪ್ಪಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಇತ್ತೀಚೆಗೆ ವರದಿಯಾಗುತ್ತಿದ್ದು, ಇದೀಗ ನಾಗ್ಪುರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನಪ್ಪಿರುವುದು […]