ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ದ: ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ದನಾಗಿದ್ದೇನೆ ಎಂದು ಸಂಸದ ನಳಿನ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಬದಲಾವಣೆ ಜಗದ ನಿಯಮ ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ […]
ಯಕ್ಷಗಾನ ಕಲೆಯ ಅಂಚೆ ಚೀಟಿ ಬಿಡುಗಡೆ: ದೈವಾರಾಧನೆಯ ಅಂಚೆ ಚೀಟಿ ಬಿಡುಗಡೆಗೂ ಪ್ರಯತ್ನ
ಮಂಗಳೂರು: ಅಂಚೆ ಇಲಾಖೆಯು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಹಯೋಗದಲ್ಲಿ ಹೊರತಂದಿರುವ ಯಕ್ಷಗಾನದ (Yakshagana) ಅಂಚೆಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಈ ಹಿಂದೆ ಉಳ್ಳಾಲದ ರಾಣಿ ಅಬ್ಬಕ್ಕ ಕುರಿತ ಅಂಚೆ ಚೀಟಿ ಬಿಡುಗಡೆಯಾಗಿತ್ತು. ಅದನ್ನು ಹೊರತುಪಡಿಸಿದರೆ ಕರಾವಳಿಯ ಸಂಸ್ಕೃತಿ ಹಾಗೂ ಜನಜೀವನ ಬಿಂಬಿಸುವ ಅಂಚೆ ಚೀಟಿಗಳು ವಿರಳ. ಯಕ್ಷಗಾನದ ಅಂಚೆ ಚೀಟಿ ಬಿಡುಗಡೆಗೊಳಿಸುವಂತೆ 2019ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. ಇಂತಹ ಪ್ರಸ್ತಾವಗಳನ್ನು ಪರಿಶೀಲಿಸಿ ಮಂಜೂರಾತಿ ಅಂಚೆ ಚೀಟಿ ಸಲಹಾ ಸಮಿತಿ ವರ್ಷಕ್ಕೊಮ್ಮೆ […]
ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದೊಳಗೆ ಬರಲಿದೆ ವಂದೇ ಭಾರತ್ ಎಕ್ಸ್ ಪ್ರೆಸ್? ಸಂಸದರಿಗೆ ರೈಲ್ವೆ ಸಚಿವರ ಭರವಸೆ
ಉಡುಪಿ/ಮಂಗಳೂರು: ಕರಾವಳಿಯ ಜನರ ಬಹುದಿನದ ಬೇಡಿಕೆ ವಂದೇ ಭಾರತ್ ಎಕ್ಸ್ ಪ್ರೆಸ್ ಸೌಲಭ್ಯ. ಹಲವಾರು ತಾಂತ್ರಿಕ ಕಾರಣಗಳಿಂದ ಕರಾವಳಿಯ ಅವಳಿ ಜಿಲ್ಲೆಗಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ನ ಸೌಕರ್ಯ ಲಭಿಸಿಲ್ಲ. ಆದರೆ ಇದೀಗ ಮಂಗಳೂರು ಮತ್ತು ಮಡ್ ಗಾಂವ್(ಗೋವಾ) ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಓಡುವ ನಿರೀಕ್ಷೆ ಇದೆ ಎಂದು ದ ಹಿಂದು ವರದಿ ಹೇಳಿದೆ. ಈ ಬಗ್ಗೆ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ […]
ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಪ್ರಹಸನ: ರಾಜೀನಾಮೆ ಕೊಟ್ಟಿಲ್ಲ ಎಂದ ಕಟೀಲ್
ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲ್, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ಜವಾಬ್ದಾರಿ ಹೊತ್ತು […]
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ
ಬಳ್ಳಾರಿ: ನಳೀನ್ ಕುಮಾರ್ ಕಟೀಲ್ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ, ಈ ಸೋಲಿನ ಹೊಣೆಯನ್ನ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ನೀಡಿದ್ದಾರೆ.