ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ: ಪುತ್ತಿಲ ಪರಿವಾರದಿಂದ ಘೋಷಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ. ಕಳೆದ ಹಲವು ದಿನಗಳಿಂದ ಬಿಜೆಪಿ ನಾಯಕರೊಂದಿಗೆ ನಡೆದ ಮಾತುಕತೆ ವಿಫಲಗೊಂಡ ಹಿನ್ನಲೆ ಇದೀಗ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಾರೆ ಎಂದು ಪುತ್ತಿಲ ಪರಿವಾರ ಘೋಷಿಸಿದೆ. ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತಾ, ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದರು. ಬಿಜೆಪಿ […]

ಸೌಜನ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ/ಉಡುಪಿ ಬಿಜೆಪಿ ಶಾಸಕರಿಂದ ಪ್ರತಿಭಟನೆ: ನಳಿನ್ ಕುಮಾರ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಆ. 27 ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಶಾಸಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರ ಹಾಕಿದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ; ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ಜಾಮೀನು

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್‌ ಕುಮಾರ್‌ ಕಟೀಲ್‌ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್‌ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್‌ ರೆಡ್ಡಿ ಹಾಗೂ ಕಾನ್‌ಸ್ಟೆಬಲ್‌ […]

ಪುತ್ತೂರಿಗೆ ಪುತ್ತಿಲ ಅಭಿಯಾನದ ಬಳಿಕ ಮಂಗಳೂರಿಗೆ ಪುತ್ತಿಲ ಅಭಿಯಾನಕ್ಕೆ ಮುನ್ನುಡಿ: ಸಂಸದ ಅಭ್ಯರ್ಥಿಯಾಗಿ ಘೋಷಿಸಲು ಜನತೆಯ ಕರೆ

ಮಂಗಳೂರು: ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರೂ, ಪಕ್ಷವು ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಿದ್ದಲ್ಲದೆ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಿತು. ಈ ಹಿಂದೆ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 66607 ಮತಗಳೊಂದಿಗೆ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಇದ್ದಾಗಲೂ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಿ 62458 […]