ನ್ಯಾಯಾಲಯದಲ್ಲಿ ಇರುವ ಅನರ್ಹತೆಯ ಕುರಿತಾದ ಪ್ರಕರಣಕ್ಕೆ ಹಿನ್ನಡೆಯಾಗದು:ನಳಿನ್
ಕುಂದಾಪುರ : ಅನರ್ಹ ಶಾಸಕರು ರಾಜಿನಾಮೆ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನುವ ಧ್ವನಿ ಸುರುಳಿಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ನೀಡೋದರಿಂದ ನ್ಯಾಯಾಲಯದಲ್ಲಿ ಇರುವ ಅನರ್ಹತೆಯ ಕುರಿತಾದ ಪ್ರಕರಣಕ್ಕೆ ಯಾವುದೆ ರೀತಿಯ ಹಿನ್ನಡೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಲ್ಲಿಗೆ ಸಮೀಪದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. […]
ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಗೆ ಅಭಿನಂದನೆ
ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ಇವರನ್ನು, ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಮಾಜಿ ಸಂಚಾಲಕ ಬಿ. ಕಿಶೋರ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಕಾವೇರಿ, ಉಡುಪಿ ಜಿಲ್ಲಾ ಬಿಜೆಪಿ, ಕೈಗಾರಿಕಾ ಪ್ರಕೋಷ್ಠದ ಸಹಸಂಚಾಲಕ ಮೇರ್ಡಿ ಸತೀಶ್ ಹೆಗ್ಡೆ, ಹಾಗೂ ಪುರಸಭಾ ಸದಸ್ಯ ಗಿರೀಶ್ ಜಿ.ಕೆ ಇವರು ಮಂಗಳೂರಿನಲ್ಲಿ ಅಭಿನಂದಿಸಿದರು.