ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಬಂಟ್ವಾಳ ಬಂಟರ ಸಂಘದಿಂದ ಸಮ್ಮಾನ
ಬಂಟ್ವಾಳ: ಬಂಟ್ವಾಳ ಬಂಟರ ಸಂಘದ ವತಿಯಿಂದ ಇಲ್ಲಿನ ಬಂಟರ ಭವನದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ 40 ಲಕ್ಷ ರೂ. ವಿದ್ಯಾರ್ಥಿವೇತನ, ಪ್ರಾಕೃತಿಕ ವಿಕೋಪದ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 2,00,000 ರೂ. ಗಳ ಚೆಕ್ ಹಸ್ತಾಂತರ ಮತ್ತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, […]