ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಬೆಂಗಳೂರು: ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೇ ಒಂದು ಸಂದೇಶ ನೀಡಲಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು ಪಡೆಯಲಿದೆ. ಯಡಿಯೂರಪ್ಪ ಅವರು ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹೊಸಪೇಟೆಯ ಸಂಕಲ್ಪ ಸಭೆಯು […]