ವಿ.ಎಸ್. ಆಚಾರ್ಯ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಉಡುಪಿಯಲ್ಲಿ ಕರ್ನಾಟಕದ ಮಾಜಿ ಸಚಿವರಾದ ದಿ. ವಿ.ಎಸ್ ಆಚಾರ್ಯ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿ.ಎಸ್ ಆಚಾರ್ಯ ಅವರ ಧರ್ಮಪತ್ನಿ ಶ್ರೀಮತಿ ಶಾಂತ ವಿಎಸ್ ಆಚಾರ್ಯ ಇವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.