ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಳಿನ್ ಪುಷ್ಪಾರ್ಚನೆ

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋದಂಡರಾಮಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಅನಂತರ ಶಿಕ್ಷಕರನ್ನು ಅಭಿನಂದಿಸಿ, ಶಾಲಾ ಮಕ್ಕಳಿಗೆ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರಾದ  ಮಂಜುನಾಥ್ ರಾಜ್, ಶಾಲೆಯ ಶಿಕ್ಷಕರು, ಪಕ್ಷದ ಪ್ರಮುಖರು, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.