ಬೆಂಗಳೂರು: ನಗರದ ಸಮಸ್ಯೆಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ನಟ ಅನಿರುದ್ದ್ ಚರ್ಚೆ

ಬೆಂಗಳೂರು: ಶನಿವಾರ ನಮ್ಮ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅವರ ತಂಡದೊಡನೆ ಚಿತ್ರನಟ ಅನಿರುದ್ದ್ ಚರ್ಚೆ ನಡೆಸಿದ್ದಾರೆ. ಬೆಂಗಳೂರು ನಗರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಅನಿರುದ್ದ್, ಬಿಬಿಎಂಪಿ ಎದುರು ಕೆಲವು ಸಲಹೆಗಳನ್ನು ಮುಂದಿಟ್ಟಿದ್ದಾರೆ. ಘನತ್ಯಾಜ್ಯ ನಿರ್ವಹಣೆ, ಸುರಕ್ಷತೆ, ಹಸಿರು ಹೊದಿಕೆಯ ಹೆಚ್ಚಳ ಮತ್ತು ಆರೋಗ್ಯ ಹಾಗೂ ನೈರ್ಮಲ್ಯ, ಕೆರೆಗಳ ಪುನರುಜ್ಜೀವನ ಮುಂತಾದ ವಿಷಯಗಳ ಕುರಿತು ಸಮಾನ ಸಂಖ್ಯೆಯ ಮಹಿಳೆಯರನ್ನೊಳಗೊಂಡ ವಿಜ್ಞಾನಿಗಳು, ಇಂಜಿನಿಯರ್ ಗಳು, ನಗರ ಯೋಜಕರು, […]