ಎಲ್ಲರಿಗಾಗಿ ಉಚಿತ ಆರೋಗ್ಯ ಸೇವೆ ಯೋಜನೆಯಡಿ ನಮ್ಮ ಕ್ಲಿನಿಕ್ ಗಳ ಉದ್ಘಾಟನೆ

ಉಡುಪಿ: ಬುಧವಾರದಂದು ಬೀಡಿನಗುಡ್ಡೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ನ ಉದ್ಘಾಟನೆ ನಡೆಯಿತು. ಸೇವೆಯನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ನಮ್ಮ ಕ್ಲಿನಿಕ್ ಜನಸ್ನೇಹಿ, ಜನೋಪಯೋಗಿ ಆರೋಗ್ಯ ಸೇವೆ ಒದಗಿಸಬೇಕು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡಜನರನ್ನೊಳಗೊಂಡಂತೆ ಎಲ್ಲರಿಗೂ ಆರೋಗ್ಯ ಸೇವೆಯನ್ನು ಸರಳವಾಗಿ ಪಡೆಯಲು ಅನುಕೂಲವಾಗುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದರು. ಜಿಲ್ಲೆಯಲ್ಲಿ […]

ಡಿ. 14 ರಂದು ನಮ್ಮ ಕ್ಲಿನಿಕ್ ಗಳ ಉದ್ಘಾಟನೆ

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರ ಪ್ರದೇಶದ ಸಮುದಾಯಕ್ಕೆ ಹಾಗೂ ವಲಸಿಗರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಉಡುಪಿ ತಾಲೂಕಿನ ಬೀಡನಗುಡ್ಡೆ, ನಿಟ್ಟೂರು ಹಾಗೂ ಕಕ್ಕುಂಜೆಯಲ್ಲಿ, ಕುಂದಾಪುರ ತಾಲೂಕಿನ ಖಾರ್ವಿಕೇರಿ ಹಾಗೂ ಟಿ.ಟಿ ರೋಡ್ ಮತ್ತು ಕಾರ್ಕಳ ತಾಲೂಕಿನಲ್ಲಿ ಮರೀನಾಪುರ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ನಮ್ಮ ಕ್ಲಿನಿಕ್‌ಗಳ ಉದ್ಘಾಟನೆಯು ಡಿಸೆಂಬರ್ 14 ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತಮ ಮತ್ತು ತ್ವರಿತ ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಶೀಘ್ರದಲ್ಲೇ ಬರಲಿದೆ 6 ‘ನಮ್ಮ ಕ್ಲಿನಿಕ್’

ನಗರ ಪ್ರದೇಶದ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್ ನಲ್ಲಿ ಉತ್ತಮವಾಗಿ ಮತ್ತು ತ್ವರಿತವಾಗಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ರಾಜ್ಯಾದ್ಯಂತ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ಉದ್ದೇಶಿಸಿದ್ದು ಉಡುಪಿ ಜಿಲ್ಲೆಯಲ್ಲಿ ಒಟ್ಟು 6 ನಮ್ಮ ಕ್ಲಿನಿಕ್ ಗಳ ಆರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿವೆ. ನಗರ ಪ್ರದೇಶದ ಸಾರ್ವಜನಿಕರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸದುದ್ದೇಶ ಹೊಂದಿದ್ದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆ […]