ರಾಜ್ಯರಾಜಧಾನಿಯಲ್ಲಿ ಕರಾವಳಿಯ ಕಲರವ: ‘ನಮ್ಮ ಕರಾವಳಿ ಉತ್ಸವ’ಕ್ಕೆ ಅಭೂತಪೂರ್ವ ಜನ ಬೆಂಬಲ
ಬೆಂಗಳೂರು: ಜೆ.ಪಿ.ನಗರದ ಬಿಬಿಎಂಪಿ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ‘ನಮ್ಮ ಕರಾವಳಿ ಉತ್ಸವ’ವನ್ನು ಕರಾವಳಿ ಒಕ್ಕೂಟದವರೆಲ್ಲಾ ಸೇರಿ ಅದ್ಧೂರಿಯಾಗಿ ಆಯೋಜಿಸಿದರು. ಕರಾವಳಿಗರ ಒಕ್ಕೂಟ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಅವರು, ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಸಬಲೀಕರಣದಲ್ಲಿ ಕರಾವಳಿ ಭಾಗದವರು ಮುಂದೆ, ಇದರ ಹಿಂದೆ ಹಿರಿಯರ ಮಾರ್ಗದರ್ಶನ, ಪರಂಪರೆ, ಸಂಸತಿ ಪ್ರಮುಖ ಕಾರಣ ಎಂದು ಹೇಳಿದರು. ಕರಾವಳಿ ಭಾಗದಲ್ಲಿ ಮಹಿಳೆಯರು ತಮ್ಮ ದಿನನಿತ್ಯದ ಕೆಲಸದೊಂದಿಗೆ ಸಾರ್ವಜನಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಇದರಿಂದ […]