ಬೆಳ್ತಂಗಡಿ: ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ : “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬಂಜಾರು ಮಲೆಯ ತುಳುನಾಡಿನ ಮೂಲ ಜನಾಂಗದ ಆದಿವಾಸಿಗಳು ವಾಸಿಸುವಂತಹ ಪ್ರದೇಶದಿಂದ ಚಾಲನೆ ನೀಡಲಾಯಿತು. ಸೆಪ್ಟೆಂಬರ್ 1ರಂದು ಪ್ರಾರಂಭವಾದ ಈ ಅಭಿಯಾನ ಗುರುವಾರದಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದ್ದು ಸುಮಾರು 1 ಲಕ್ಷಕ್ಕೂ ಮೀರಿದ ಪೋಸ್ಟ್ ಕಾರ್ಡ್ ಗಳನ್ನು ತುಳು ಭಾಷೆಯ ಮಾನ್ಯತೆಗಾಗಿ ದೇಶದ ಪ್ರಧಾನಿಯವರಿಗೆ ಕಳುಹಿಸುವ ಗುರಿಯನ್ನು ಹೊಂದಿದೆ. ಈ ಅಭಿಯಾನಕ್ಕೆ ಎಲ್ಲಾ ಸಂಘ ಸಂಸ್ಥೆಗಳ ಬೆಂಬಲವನ್ನು […]