ಜೂ.2: ‘ನನ್ನ ಕ್ಷೇತ್ರ- ನನ್ನ ಕನಸು’ ಶಾಸಕರೊಂದಿಗೆ ಒಂದು ಸಂವಾದ ಕಾರ್ಯಕ್ರಮ
ಉಡುಪಿ: ತಿಂಗಳೆ ಪ್ರತಿಷ್ಠಾನದ ವತಿಯಿಂದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮವನ್ನು ಜೂನ್ 2ರಂದು ಮಧ್ಯಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದು, ಈ ಸಂವಾದದಲ್ಲಿ ಜಿಲ್ಲೆಯ ಐದು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಂಗಳೆ ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಶ್ರೀರಾಜ ಗುಡಿ ಉಪಸ್ಥಿತರಿರಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, […]