ಕಾರ್ಕಳ: ಭಜನಾ ಒಕ್ಕೂಟದ ಅಧ್ಯಕ್ಷರಿಗೆ ಸನ್ಮಾನ

ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕದಲ್ಲಿ ಜರಗಿದ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಸಂಭ್ರಮ ಹಾಗೂ ದ್ವಿತೀಯ ವರ್ಷದ ಭಜನೋತ್ಸವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಭಜನಾ ಒಕ್ಕೂಟದ ಅಧ್ಯಕ್ಷ ಶ್ರೀಕಾಂತ್ ಪ್ರಭು ಪಳ್ಳಿ ಹಾಗೂ ಕಾರ್ಕಳ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಯರ್ಲಪಾಡಿ ಇವರನ್ನು ಸನ್ಮಾನಿಸಲಾಯಿತು.

ನಂದಳಿಕೆ: 14 ನೇ ಶತಮಾನದ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಇಲ್ಲಿನ ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ಕಾಲದ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ […]

ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ಕೊಡದೆ ಎಂದಿನಂತೆ ತರಗತಿ ನಡೆಸಿದ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆ

ಕಾರ್ಕಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂದಿನಂತೆ ತರಗತಿ ನಡೆದಿದೆ. ಮಳೆಯ ವಿಕೋಪಕ್ಕೆ ಮಕ್ಕಳು ಗುರಿಯಾಗದಿರಲೆಂದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಸಾರುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ, ಇಲ್ಲಿನ ಆಡಳಿತ ಮಂಡಳಿ ಆದೇಶಕ್ಕೆ ಕಿಮ್ಮತ್ತು ನೀಡದೆ ತರಗತಿ ನಡೆಸಿದೆ. ಶಾಲೆಯು ತಮ್ಮ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತಂದು ಎಂದಿನಂತೆ ತರಗತಿಯನ್ನು ನಡೆಸಿರುವುದು […]