ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಲು ಚಿಂತನೆ: ಸಚಿವ ವಿ. ಸುನೀಲ್ ಕುಮಾರ್
ಉಡುಪಿ: ಬಿಲ್ಲವ ಸಮುದಾಯದ ಅಭಿವೃದ್ದಿಗಾಗಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ದಿ ನಿಗಮ ಆರಂಭಿಸುವ ಚಿಂತನೆ ಇದೆ ಎಂದು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಮುದಾಯಕ್ಕೆ ಆರ್ಥಿಕ ಚೇತನ ನೀಡಲು ನಾರಾಯಣ ಗುರು ಅಭಿವೃದ್ಧಿ ನಿಗಮ ಆರಂಭಿಸಿ, ಅದರಂತೆ ಕಾರ್ಯಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.