ನಾರಾಯಣ ಗುರುಗಳು ವಿಶ್ವ ಮಾನವರು, ಕೇವಲ ಹಿಂದುಳಿದ ವರ್ಗಕ್ಕೆ ಸೀಮಿತವಾಗಿರಲಿಲ್ಲ: ಪ್ರತಿಭಾ ಕುಳಾಯಿ 

ನಾರಾಯಣ ಗುರುಗಳು ವಿಶ್ವ ಮಾನವರು, ಅವರು ಕೇವಲ ಹಿಂದುಳಿದ ವರ್ಗಕ್ಕೆ ಸೀಮಿತವಾಗಿರಲಿಲ್ಲ. ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವಸಿದ್ಧಾಂತವನ್ನು ಜಗತ್ತಿಗೆ ಸಾರಿದ್ದರು ಎಂದು ಕುಳಾಯಿ ಫೌಂಡೇಶನ್‌ ಅಧ್ಯಕ್ಷೆ ಪ್ರತಿಭಾ ಕುಳಾಯಿ ಹೇಳಿದರು. ಒಂದು ಕಾಲದಲ್ಲಿ ಹೀನಾಯ ಸ್ಥಿತಿಯಲ್ಲಿದ್ದ ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತಂದವರು ನಾರಾಯಣ ಗುರುಗಳು. ಇಂದು ಹಿಂದುಳಿದ ವರ್ಗದವರು ಎಂಎಲ್ ಎ, ಎಂಪಿ ಸ್ಥಾನದಲ್ಲಿದ್ದಾರೆ. ಆದರೆ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರಕಾರ ಅವಕಾಶ ನಿರಾಕರಿಸಿದಾಗ […]