ಇಂದು ಜನಪ್ರಿಯ ನಾಯಕ ನರೇಂದ್ರ ಮೋದಿ ಹುಟ್ಟುಹಬ್ಬ: ಪ್ರಧಾನಿ ಬಗ್ಗೆ ಒಂದಷ್ಟು ಮಾಹಿತಿ
ದೇಶದ ಅಪ್ರತಿಮ ಜನನಾಯಕ, ಭಾರತವನ್ನು ವಿಶ್ವಗುರುವನ್ನಾಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಸೆ.17) 70ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ರಾಜಕೀಯ ಹಾದಿಯಲ್ಲಿ ಬಿಜೆಪಿಯ ಸಂಘಟನೆ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ಪಕ್ಷವನ್ನು ಸಂಸತ್ನ ಗದ್ದುಗೆಗೇರಿಸುವಲ್ಲಿ ಯಶಸ್ವಿಯಾಗಿರುವ ಮೋದಿ ಅವರು ಎರಡನೇ ಅವಧಿಗೂ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಸಫಲರಾಗಿದ್ದಾರೆ. ಇಡೀ ಜಗತ್ತಿಗೆ ಕಂಟಕವಾಗಿದ್ದ ಕೊರೊನಾ ಮಹಾಮಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ದೇಶವನ್ನು ಸುರಕ್ಷತೆಯ ಕಡೆಗೆ ಕೊಂಡೊಯ್ಯುವಲ್ಲಿ ಸಫಲರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಸದ್ದು ಅಡಗಿಸುವ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. […]