ಡಿ. 27 ರಂದು ಜಿ.ಶಂಕರ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನುಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ […]

ಗುಣಮಟ್ಟ ಖಾತರಿ ಪಡಿಸಿಕೊಂಡು ಸರಕು ಯಾ ಸೇವೆಗಳನ್ನು ಖರೀದಿಸಿ: ನ್ಯಾ. ಶರ್ಮಿಳಾ ಎಸ್

ಉಡುಪಿ: ಮಾರುಕಟ್ಟೆಯಲ್ಲಿ ಗ್ರಾಹಕನೇ ಸಾರ್ವಭೌಮನಾಗಿದ್ದು, ಸರಕು ಮತ್ತು ಸೇವೆಗಳನ್ನು ಖರೀದಿಸುವಾಗ ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದಿರಬೇಕು. ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಯಾವುದೇ ಸರಕು ಮತ್ತು ಸೇವೆಗಳನ್ನು ಪಡೆಯುವ ಮುನ್ನ ಗ್ರಾಹಕರು ಆ ವಸ್ತುಗಳು ಮತ್ತು ಸೇವೆಯ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ, ಗುಣಮಟ್ಟವನ್ನು ಖಾತರಿಪಡಿಸಿಕೊಂಡು ಅವುಗಳನ್ನು ಖರೀದಿಸಬೇಕು. ಮಾರಾಟಗಾರರು ಕಳಪೆ ವಸ್ತುಗಳನ್ನು ಮೋಸದಿಂದ ಗ್ರಾಹಕರಿಗೆ ಮಾರಿದ್ದಲ್ಲಿ ಅಂತಹ ಮಾರಾಟಗಾರರಿಂದ ಸೂಕ್ತ ಪರಿಹಾರ ಪಡೆಯುವ ಹಕ್ಕುಗಳನ್ನು ಗ್ರಾಹಕರು ಹೊಂದಿದ್ದು, ಉಡುಪಿ ಜಿಲ್ಲೆಯಲ್ಲಿ ಗ್ರಾಹಕರ ವ್ಯಾಜ್ಯಗಳ […]

ಡಿ. 26 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿಸೆಂಬರ್ 26 ರಂದು ಬೆಳಗ್ಗೆ 10.30 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, […]