ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ: ಆಗಸ್ಟ್ 10 ರಂದು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐ.ಟಿ.ಐ ನರ್ಸಿಂಗ್ ಕಾಲೇಜು, ಪ್ರಥಮ ವರ್ಷದ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಶಾಲಾ- ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಹಾಗೂ ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ […]