ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ
ಉಡುಪಿ: ರಾಷ್ಟ್ರದ ಕೈಮಗ್ಗದ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರ ‘ಸ್ಥಳೀಯ ದಿಂದ ಜಾಗತಿಕ’ ಎಂಬ ಕರೆಯಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಯವರ ನೇತೃತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನೂತನ ಸಚಿವ ವಿ.ಸುನೀಲ್ ಕುಮಾರ್ ಪಕ್ಷದ ಹಿರಿಯ ಕಾರ್ಯಕರ್ತೆ ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿರುವ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜೀವ ನಗರದ […]