ರಾಹುಲ್ ಗಾಂಧಿಯ ಹೊಸ ಪಾಸ್ ಪೋರ್ಟ್ ಮನವಿಗೆ ವಿರೋಧ ವ್ಯಕ್ತಪಡಿಸಿದ ಸುಬ್ರಮಣ್ಯನ್ ಸ್ವಾಮಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಮನವಿಯನ್ನು ವಿರೋಧಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ಗಾಂಧಿ ಪರ ವಕೀಲ ತರನ್ನುಮ್ ಚೀಮಾ ಅವರು ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ರಾಹುಲ್ ಗಾಂಧಿಗೆ ಜಾಮೀನು ನೀಡುವ ಆದೇಶದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ ಎಂದು ಕೋರ್ಟ್ ಗಮನಿಸಿದೆ. […]

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿಗೆ ಇಡಿ ಸಮನ್ಸ್, ಜುಲೈ 21 ರಂದು ಹಾಜರಾಗಲು ಕೋರಿಕೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜುಲೈ 21 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದೆ. ಕೋವಿಡ್ -19 ರಿಂದ ಚೇತರಿಸಿಕೊಳ್ಳುವುದನ್ನು ಉಲ್ಲೇಖಿಸಿ ಸೋನಿಯಾ ಗಾಂಧಿ ಈ ಹಿಂದೆ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು. ಮೊದಲನೆ ನೋಟೀಸ್ ನೀಡಿದಾಗ ಸೋನಿಯಾ ಗಾಂಧಿಗೆ ಕೋವಿಡ್ ಪತ್ತೆ ಪರೀಕ್ಷೆಯಲ್ಲಿ ಸಂಕ್ರಮಣ ಇದೆ ಎಂದಾಗಿತ್ತು ಮತ್ತೆ ಆಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಜೂನ್ 23 ರಂದು ಹಾಜರಾಗಲು […]

ರಾಹುಲ್ ಗಾಂಧಿಗೆ ಇಡಿ ಸಮನ್ಸ್: ಮೋದಿ ಸರ್ಕಾರದಿಂದ ಇಡಿ ದುರ್ಬಳಕೆಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸುವ ಮುನ್ನವೇ ಕೇಂದ್ರ ಸರ್ಕಾರದ ಇಡಿ ದುರ್ಬಳಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಜಮ್ಮು ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಇಂದು ರಾಹುಲ್ ಗಾಂಧಿ ವಿಚಾರಣೆಗಾಗಿ ಇಡಿ ಕಚೇರಿಗೆ ತೆರಳುವ ಸಾಧ್ಯತೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ರಾಹುಲ್ ಜೊತೆ ಇಡಿ ಕಚೇರಿಗೆ ಹೋಗಲಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಸತ್ಯ ಕಾ ಸಂಗ್ರಾಮ್’ ಮುಂದುವರೆಯಲಿದೆ ಎಂದು […]

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್‌ಗೆ ಇಡಿ ಸಮನ್ಸ್

  ನವದೆಹಲಿ: ಕಾಂಗ್ರೆಸ್ ಪಕ್ಷದ ಒಡೆತನದ ಮತ್ತು ಪಕ್ಷ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. 2013 ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯದಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಮೇರೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ತನಿಖೆ […]