ಹೆಮ್ಮಾಡಿ: ಜನತಾ ಕಾಲೇಜು ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ ವಿಭಾಗ)ಯು ಚಾಮರಾಜನಗರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ವಿಜೇತಳಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ.ಪೂಜಾರಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.