ನಗರ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ
ಉಡುಪಿ: ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು. ಅವರು ಬುಧವಾರ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ […]
ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ
ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ಇಲ್ಲಿನ ಐಕ್ಯೂಏಸಿ , ಕನ್ನಡ ವಿಭಾಗ, ಗ್ರಂಥಾಲಯ ಮತ್ತು ಉಡುಪಿ ಮಾಹಿತಿ ಕೇಂದ್ರ ಜಂಟಿ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ – 2022ರ ಉದ್ಘಾಟನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ ಮತ್ತು ರಾಜಾರಾಮ್ ಮೋಹನ್ ರಾಯ್ ರವರ 250 ನೇ ಜನ್ಮದಿನೋತ್ಸವ ಪ್ರಯುಕ್ತ ‘ಮಹಿಳಾ ಸಬಲೀಕರಣ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು. ಜಿಲ್ಲಾ ಶಿಕ್ಷಣ ಮತ್ತು […]