ಗಡಿಯಲ್ಲಿ ಸೇನಾಪಡೆಯೊಂದಿಗೆ ಕಾದಾಟ: ಮೂವರು ಹುತಾತ್ಮ

ನವದೆಹಲಿ: ಗಡಿಭಾಗದಲ್ಲಿ ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ಲಡಾಖ್‌ನ ಪೂರ್ವಭಾಗದ ಗಲ್ವಾನ್‌ ಕಣಿವೆಯಲ್ಲಿ ನಡೆದ ಗುಂಡಿನ ಕಾದಾಟದಲ್ಲಿ ಭಾರತದ ಸೇನಾಪಡೆಯ ಅಧಿಕಾರಿ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾಪಡೆಯ ಮೂಲಗಳು ತಿಳಿಸಿದೆ. ಈ  ಪರಿಸ್ಥಿತಿಯನ್ನು ತಿಳಿಗೊಳಿಸುದಕ್ಕಾಗಿ ಉಭಯ ದೇಶಗಳ ಸೇನಾಪಡೆ ಅಧಿಕಾರಿಗಳು ಗಲ್ವಾನ್‌ನಲ್ಲಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.