ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆ: ಅವಧಿ ವಿಸ್ತರಣೆ
ಉಡುಪಿ: ಭಾರತೀಯ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ನನ್ನ ಮತ ನನ್ನ ಭವಿಷ್ಯ ಒಂದು ಮತದ ಶಕ್ತಿ ವಿಷಯದ ಕುರಿತು ರಸಪ್ರಶ್ನೆ, ವೀಡಿಯೋ ತಯಾರಿಕೆ, ಗಾಯನ, ಭಿತ್ತಿಚಿತ್ರ ವಿನ್ಯಾಸ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯ ನಮೂದುಗಳನ್ನು [email protected] ನಲ್ಲಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.