ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ; ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಧಿಕಾರಿ

ಉಡುಪಿ: ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ದಿನಾಚರಣೆ ಹಾಗೂ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳಾಗಿದ್ದು, ಮತದಾನದ ಮೂಲಕ ಜನಪ್ರತಿನಿಧಿಗಳಲ್ಲಿ ಆಯ್ಕೆ ಮಾಡುವ ಅವಕಾಶವಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮತದಾರ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಅವಶ್ಯ. […]