ಜನವರಿ 12 ರಂದು ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಉಚಿತ ಮಾಸಿಕ ಉನ್ನತಿ ಉದ್ಯೋಗ ಮೇಳಕ್ಕೆ ಚಾಲನೆ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಹಾಗೂ ಉದ್ಯೋಗಾಧಾರಿತ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಜಿಲ್ಲೆಯ ಹಾಗೂ ರಾಜ್ಯದ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗವಕಾಶವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಇದೀಗ ಜನವರಿ 12ರ “ರಾಷ್ಟ್ರೀಯ ಯುವ ದಿವಸ”ದ ಅಂಗವಾಗಿ ಜನವರಿ 2023ರಿಂದ ಜನವರಿ 2024ರ ವರೆಗೆ ಉಚಿತ ಮಾಸಿಕ “ಉನ್ನತಿ ಉದ್ಯೋಗ ಮೇಳ”ಗಳನ್ನು ಆಯೋಜಿಸಲಿದೆ. ಈ ಮೇಳವು ಪ್ರತಿ ತಿಂಗಳ ಎರಡನೇ ಗುರುವಾರದಂದು ಸಂಸ್ಥೆಯ ಕಚೇರಿಯಲ್ಲಿ ನೇರ ಸಂದರ್ಶನ ಅಥವಾ ಆನ್ ಲೈನ್ ಸಂದರ್ಶನದ ಮೂಲಕ ನಡೆಯಲಿದೆ. ಭಾಗವಹಿಸಲು […]

ಜ.12 ರ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿ: ಕುಯಿಲಾಡಿ

ಉಡುಪಿ: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದರವರ ಜನ್ಮ ದಿನ ಜನವರಿ12. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. […]