ಉಡುಪಿ: ಮಾ.10 ರಿಂದ ರಾಷ್ಟ್ರೀಯ ಯುವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್

ಭಾರತದ ಅಥ್ಲೆಟಿಕ್ ಫೆಡರೇಷನ್, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್‌ನ ಸಂಯುಕ್ತ ಆಶ್ರಯದಲ್ಲಿ 18ನೇ ರಾಷ್ಟ್ರೀಯ ಯುವ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಮಾ.10ರಿಂದ 12ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿಟ್ಟೆಯ ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಯೋಜಕತ್ವದಲ್ಲಿ ಈ ಪ್ರತಿಷ್ಠಿತ ಕ್ರೀಡಾಕೂಟ ಮೂರು ದಿನಗಳ ಕಾಲ ನಡೆಯಲಿದೆ ಎಂದರು. ಈ ಕ್ರೀಡಾಕೂಟದಲ್ಲಿ ದೇಶದ […]