ನಾಳೆ (ನ.9) ಬೆಳಗ್ಗೆ ಅಯೋಧ್ಯೆ ತೀರ್ಪು ಪ್ರಕಟ
ನವದೆಹಲಿ: ಹಲವು ವರ್ಷಗಳಿಂದ ಇಡೀ ಭಾರತ ದೇಶವೇ ಕಾಯುತ್ತಿರುವ ಅಯೋಧ್ಯೆಯ ತೀರ್ಪು ಶನಿವಾರ (ನ.9)ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನ.17 ರಂದು ನಿವೃತ್ತಿ ಆಗಲಿರುವ ಹಿನ್ನೆಲೆಯಲ್ಲಿ ತೀರ್ಪು ಶೀಘ್ರ ಪ್ರಕಟವಾಗುವ ನಿರೀಕ್ಷೆ ಇತ್ತು. ಹೀಗಾಗಿ ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅ.16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು […]