ನಾವುಂದ: ಸೌಪರ್ಣಿಕ ಹೊಳೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ಬೈಂದೂರು: ಹೊಳೆಯ ದಡದ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ರೈಲ್ವೆ ಬ್ರಿಡ್ಜ್ ಬಳಿಯ ಸೌಪರ್ಣಿಕ ಹೊಳೆಯಲ್ಲಿ ಸಂಭವಿಸಿದೆ. ಮೃತರನ್ನು ನಾವುಂದ ಗ್ರಾಮದ ಅರೆಹೊಳೆ ನಿವಾಸಿ 50 ವರ್ಷದ ವಿಜಯ ಮಡಿವಾಳ ಎಂದು ಗುರುತಿಸಲಾಗಿದೆ. ಇವರು ಕೆಲಸಕ್ಕೆಂದು ಹೋದವರು ಎರಡ್ಮೂರು ದಿನಗಳಿಗೊಮ್ಮೆ ಮನೆಗೆ ಬರುತ್ತಿದ್ದು, ಅದರಂತೆ ಫೆ.1ರಂದು ಬೆಳಿಗ್ಗೆ ಕೆಲಸಕ್ಕೆಂದು ಹೋದವರು ಮನೆಗೆ ಬಂದಿರುವುದಿಲ್ಲ. ಫೆ. 3ರಂದು ಬೆಳಿಗ್ಗೆ ವ್ಯಕ್ತಿಯೊಬ್ಬರು ವಿಜಯ ಮನೆಯವರಿಗೆ ಕರೆ […]