ಎನ್.ಸಿ.ಸಿ ವಿಶೇಷ ಪ್ರವೇಶ: ಅಖಿಲ ಭಾರತ15ನೇ ರ‍್ಯಾಂಕ್ ಗಳಿಸಿದ ಭರತ್ ಬಾಬು ದೇವಾಡಿಗ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಜೆ.ಯು.ಒ (ವಿದ್ಯಾರ್ಥಿ) ಭರತ್ ಬಾಬು ದೇವಾಡಿಗ ಅವರು ಎನ್.ಸಿ.ಸಿ ವಿಶೇಷ ಪ್ರವೇಶದಲ್ಲಿ ಅಖಿಲ ಭಾರತ ರ್ಯಾಂಕಿಂಗ್ ನಲ್ಲಿ 15ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಕೇಂದ್ರದ ಸಿಬ್ಬಂದಿ ಆಯ್ಕೆ ಮಂಡಳಿ ( ಎಸ್.ಎಸ್.ಸಿ)ಯ 21ಎಸ್.ಎಸ್.ಬಿ ಭೂಪಾಲ್ ನಿಂದ ಇವರನ್ನು ಶಿಫಾರಸು ಮಾಡಲಾಗಿದೆ. ಇವರು ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಿ.ಶುಭಕರಾಚಾರಿ, ಎನ್.ಸಿ.ಸಿ ಸೇನಾ ಅಧಿಕಾರಿ ಅಂಜನ್ ಕುಮಾರ್ ,ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು […]

ಎಂಐಟಿ ಕಾಲೇಜಿನಲ್ಲಿ ಎನ್ ಸಿ ಸಿ ವಿದ್ಯಾರ್ಥಿಗಳಿಗಾಗಿ ರೋಯಿಂಗ್ ಸಿಮ್ಯುಲೇಟರ್ ಅನಾವರಣ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಘಟಕವಾದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಎನ್ ಸಿ ಸಿ ವಿದ್ಯಾರ್ಥಿಗಳ ರೋಯಿಂಗ್ ಮತ್ತು ದೈಹಿಕ ತರಬೇತಿಯನ್ನು ಸುಧಾರಿಸಲು ಮತ್ತು ಹೊಸತನವನ್ನು ಉತ್ತೇಜಿಸಲು ಮೊತ್ತ ಮೊದಲ ಬಾರಿಗೆ ರೋಯಿಂಗ್ ಸಿಮ್ಯುಲೇಟರ್ ಅನ್ನು ಅನಾವರಣಗೊಳಿಸಲಾಯಿತು. ಸಮಾರಂಭದಲ್ಲಿ ಮಾಹೆ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ ವೆಂಕಟೇಶ್, ಹಾಗೂ ಎಂಐಟಿ ಮತ್ತು ಮಾಹೆಯ ಇತರ ಗಣ್ಯರು ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ ವೆಂಕಟೇಶ್ ಮಾತನಾಡಿ, ಇಂತಹ ಹಲವು ವಿನೂತನ […]

ಭಂಡಾರ್ಕಾರ್ಸ್ ಕಾಲೇಜು: ಎನ್.ಸಿ.ಸಿ ಆರ್ಮಿ ಕೆಡೆಟ್ ಗಳು ಥಲ್ ಸೈನಿಕ್ ಶಿಬಿರದಲ್ಲಿ ಭಾಗಿ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ  ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 25 ರವರೆಗೆ ದೆಹಲಿಯಲ್ಲಿ ನಡೆಯಲಿರುವ “ಥಲ್ ಸೈನಿಕ್ ಶಿಬಿರ”ದಲ್ಲಿ ಭಾಗವಹಿಸುತ್ತಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇವರಿಗೆ ಕಾಲೇಜಿನ ಎನ್ ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎಂ.ಎಲ್ ತರಬೇತಿ ನೀಡಿದ್ದರು.    

ಭಾರತವನ್ನು ವಿಶ್ವಗುರುವಾಗಿಸಲು ಎಲ್ಲರ ಶ್ರಮವೂ ಅಗತ್ಯ: ಎ.ಯೋಗೀಶ್ ಹೆಗ್ಡೆ

ನಿಟ್ಟೆ: ಇಂದಿನ ನಮ್ಮ ಉತ್ತಮ ಬದುಕಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವೇ ಕಾರಣವೆಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಅದೇ ರೀತಿ ಪ್ರಸ್ತುತ ದಿನಗಳಲ್ಲಿ ಪ್ರತಿನಿತ್ಯದ ನೆಮ್ಮದಿಯ ಬದುಕಿಗೆ ಕಾರಣವಾಗಿರುವ ದೇಶದ ಗಡಿ ಕಾಯುವ ಯೋಧರ ತ್ಯಾಗಬಲಿದಾನವೂ ಸ್ಮರಣೀಯವಾದುದು. ಜಾಗತಿಕ ಮಟ್ಟದಲ್ಲಿ ಭಾರತವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದು ನಿಟ್ಟೆ ಕ್ಯಾಂಪಸ್‌ನ ಮೈಂಟೆನೆನ್ಸ್ ಎಂಡ್ ಡೆವಲೆಪ್ಮೆಂಟ್ ನ ನಿರ್ದೇಶಕ ಎ.ಯೋಗೀಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ಆಗಸ್ಟ್15 ರಂದು ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ […]