ಜಿಲ್ಲೆಯ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ತಕ್ಷಣ ಸಂಪರ್ಕಕ್ಕೆ ಸಿಗುವಂತಿರಬೇಕು: ಕೂರ್ಮಾ ರಾವ್ ಎಂ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ರಾಜ್ಯ ವಿಕೋಪ ನಿರ್ವಹಣಾ ಪಡೆಯ ಒಂದು ತಂಡವನ್ನು ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಕೋರಲಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಯಾವುದೇ ಸಂದರ್ಭದಲ್ಲೂ ತಕ್ಷಣ ಸಂಪರ್ಕಕ್ಕೆ ಸಿಗುವಂತೆ ಇರಬೇಕು ಮತ್ತು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ರಕ್ಷಣೆ ಮಾಡಬೇಕು. ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗೆ ರಚಿಸಲಾಗಿರುವ ಎಲ್ಲಾ ವಾರ್ಡ್ ಮತ್ತು ಗ್ರಾಮ ತಾಲೂಕು […]
ಜೂಲಿ-ರೋಮಿಯೋ-ಹನಿ-ರಾಂಬೊ: ಟರ್ಕಿಯಲ್ಲಿ ಭಾರತೀಯ ಶ್ವಾನದಳದ ನಾಲ್ಕು ಹೀರೋಗಳು
ಸೈಪ್ರಸ್: ಫೆಬ್ರವರಿ 6 ರಂದು ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪನದ ನಂತರ, 5,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ವಿಶ್ವದ ಬಹುತೇಕ ದೇಶಗಳು ಟರ್ಕಿಗೆ ಸಹಾಯ ಹಸ್ತ್ ಚಾಚಿವೆ. ಭಾರತವೂ ಕೂಡಾ ಶ್ವಾನದಳ ಮತ್ತು 101 ಸದಸ್ಯರ ಎನ್.ಡಿ.ಆರ್.ಎಫ್ ತಂಡವನ್ನು ಕಳುಹಿಸಿದ್ದು, ತಂಡವು ಅದಾಗಲೇ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಮಧ್ಯೆ ಶ್ವಾನದಳದಲ್ಲಿ ಜೂಲಿ, ರೋಮಿಯೋ, ಹನಿ ಮತ್ತು ರಾಂಬೊ ಎನ್ನುವ ನಾಲ್ಕು ಶ್ವಾನಗಳು ರಕ್ಷಣಾ ಕಾರ್ಯಾಚರಣೆಯ ಭಾಗವಾಗಿವೆ. ಈ ಲ್ಯಾಬ್ರಡಾರ್ ತಳಿಯ […]
ಭೂಕಂಪ ಸಂತ್ರಸ್ತ ಟರ್ಕಿಗೆ ಭಾರತದ ಸಹಾಯಹಸ್ತ: ಶ್ವಾನದಳದೊಂದಿಗೆ ಎನ್.ಡಿ. ಆರ್.ಎಫ್ ತಂಡದಿಂದ ರಕ್ಷಣಾ ಕಾರ್ಯ
ಸೈಪ್ರಸ್: ಟರ್ಕಿಯಲ್ಲಿ ನಿನ್ನೆ 7.8, 7.6 ಮತ್ತು 6.0 ತೀವ್ರತೆಯ ಸತತ ಮೂರು ವಿನಾಶಕಾರಿ ಭೂಕಂಪಗಳಿಂದ 3,400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. ಕಟ್ಟಡಗಳು ತರಗೆಲೆಗಳಂತೆ ಉದುರಿದ್ದು, ಈ ಕಟ್ಟಡಗಳ ಅವಶೇಷಗಳಡಿಯಲ್ಲಿ ಅದೆಷ್ಟು ಜನ ರಕ್ಷಣೆಗಾಗಿ ಕಾಯುತ್ತಿದ್ದಾರೆ ಎನ್ನುವ ಲೆಕ್ಕವೇ ಇಲ್ಲ. ಇದೀಗ, ವಿಶೇಷ ತರಬೇತಿ ಪಡೆದ ಶ್ವಾನದಳದೊಂದಿಗೆ ಭಾರತದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ತಂಡವು ಅಗತ್ಯ ಸಲಕರಣೆಗಳೊಂದಿಗೆ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗಾಗಿ ಟರ್ಕಿಗೆ ತೆರಳಿದೆ. ಟರ್ಕಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು […]
ಗುಜರಾತಿನಲ್ಲಿ ತೂಗು ಸೇತುವೆ ದುರಂತ: 130 ಕ್ಕೂ ಹೆಚ್ಚು ಜನರ ಸಾವು, ಪರಿಹಾರ ಘೋಷಿಸಿದ ಪ್ರಧಾನಿ
ಅಹಮದಾಬಾದ್: ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಸುದ್ದಿಯು ದೇಶಾದ್ಯಂತ ತಲ್ಲಣವನ್ನು ಸೃಷ್ಟಿಸಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ರಕ್ಷಣಾ ತಂಡಗಳು ಘಟನೆಯ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ ಮತ್ತು ಸುಮಾರು ಇನ್ನೂರು ಜನರ ತಂಡವು ರಾತಿಯಿಡೀ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ ಇದುವರೆಗೆ 150 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ […]