ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ: ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಅಶೋಕ್ ಅವರು ಫೆ. 19ರಂದು ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ […]