ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಪ್ರಥಮ ಪಂಚಮಿ ತೀರ್ಥಸ್ನಾನ ಸಂಪನ್ನ

ಉಡುಪಿ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಮೀಪವಿರುವ ಸೀತಾ ನದಿ ತಟದಲ್ಲಿರುವ ಪ್ರಸಿದ್ದ ಪಂಚಮಿಕಾನದಲ್ಲಿ ಸೋಮವಾರದಂದು ಮೊದಲ ಪಂಚಮಿ ತೀರ್ಥಸ್ನಾನ ನಡೆಯಿತು. ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ಮೂರ್ತಿಯನ್ನು ಸೀತಾನದಿಯಲ್ಲಿ ಪವಿತ್ರ ಸ್ನಾನ ಮಾಡಿಸಿ ನಾಗಸನ್ನಿಧಿಯಲ್ಲಿ ಪೂಜಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ರಘುರಾಮ ಮಧ್ಯಸ್ಥ, ಅರ್ಚಕ ರಾಘವೇಂದ್ರ ಅಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿಯ ಸದಸ್ಯರು, ಅರ್ಚಕರು, ಚಾಕರಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪೂಜಾ ವಿಧಿ […]

ನೀಲಾವರ: ನ. 20ರಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ

ನೀಲಾವರ: ನ. 20 ಆದಿತ್ಯವಾರದಂದು ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮಂಡಳಿಯ 13ನೇ ವರ್ಷದ ಪ್ರಥಮ ದೇವರ ಸೇವೆಯಾಟ ನಡೆಯಲಿದ್ದು ಶಾಸಕ ಕೆ. ರಘುಪತಿ ಭಟ್ ಉದ್ಗಾಟಿಸಲಿದ್ದಾರೆ. ರಾತ್ರಿ 9:00 ಗಂಟೆಗೆ 13ನೇ ವರ್ಷದ ತಿರುಗಾಟಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುವುದು. ಅಧ್ಯಕ್ಷತೆ: ಶ್ರೀ ಎನ್. ರಘುರಾಮ ಮದ್ಯಸ್ಥ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಮುಖ್ಯ ಅತಿಥಿ: ಶ್ರೀ ಮಹೇಂದ್ರ ಕುಮಾರ್ ನೀಲಾವರ ಅಧ್ಯಕ್ಷರು, ನೀಲಾವರ ಗ್ರಾಮ ಪಂಚಾಯತ್ ಶ್ರೀ ಉಮೇಶ್ ಎ. ನಾಯ್ಕ್ ಕಾರ್ಯದರ್ಶಿ, ರಾಜ್ಯ ಎಸ್ .ಟಿ. ಮೋರ್ಚಾ […]

ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ

ಉಡುಪಿ: ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ ಕಾರ್ಯಕ್ರಮ ಭಾನುವಾರದಂದು ನೀಲಾವರ ಬಳಿಯ ಸೀತಾನದಿಯ ತಟದಲ್ಲಿರುವ ಬಾವಲಿಗುಡ್ಡೆ ರೆಸಾರ್ಟ್ ನಲ್ಲಿ ನಡೆಯಿತು. ಮಕ್ಕಳು ಸೇರಿದಂತೆ ಒಟ್ಟು 51 ಜನರು ಸ್ನೇಹಕೂಟದಲ್ಲಿ ಭಾಗವಹಿಸಿ ಕೂಟವನ್ನು ಯಶಸ್ವಿಯಾಗಿಸಿದರು.

ಉಡುಪಿ ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಶನಿವಾರದಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಬಾವ್ತಿಸ್ ಡಿಸೋಜಾ ಹಾಗೂ ಕಾಂಗ್ರೆಸ್ […]

ನೀಲಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಸಂಪನ್ನ

ಮಂದಾರ್ತಿ: ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಬುಧವಾರ ವಿಜಯದಶಮಿಯಂದು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ಮೂಲಕ ವಿಜೃಂಭಣೆಯಿಂದ ಸಂಪನ್ನಗೊಂಡಿತು. ನವರಾತ್ರಿ ಪರ್ಯಂತ ದಿನಂಪ್ರತಿ ದುರ್ಗಾ ಹೋಮ, ಅನ್ನಸಂತರ್ಪಣೆ ನಡೆಯಿತು. ಶುಕ್ರವಾರ ವಿಜಯದಶಮಿಯಂದು ಚಂಡಿಕಾಯಾಗ, ಮಹಾ ಅನ್ನ ಸಂತರ್ಪಣೆ ಮತ್ತು ಸಂಜೆ ಸಾಮೂಹಿಕ ದೀಪ ನಮಸ್ಕಾರ ಪೂಜೆ ನಡೆಯಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ರಘರಾಮ ಮಧ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ಅರ್ಚಕರಾದ ಕೃಷ್ಣ ಅಡಿಗ, ಚಂದ್ರಶೇಖರ […]