ನೀಟ್ 2023: ಎಕ್ಸ್ಪರ್ಟ್’ನ ಬೈರೇಶ್‍ಗೆ 2ನೇ ರ‍್ಯಾಂಕ್
ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಎಸ್.ಎಚ್. ಅಖಿಲ ಭಾರತ ಮಟ್ಟದಲ್ಲಿ 48ನೇ ರ್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಒಟ್ಟು 720 ಅಂಕಗಳಲ್ಲಿ 710 ಅಂಕ ಪಡೆದು, ರಾಜ್ಯದ ದ್ವಿತೀಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಒಟ್ಟು ಕಾಲೇಜಿನ 1365 ವಿದ್ಯಾರ್ಥಿಗಳಲ್ಲಿ 1307ರಷ್ಟು ಅಂದರೆ ಶೇ. 96ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. […]