ನೀಟ್ ಮೊದಲ ಸುತ್ತಿನ ಆಯ್ಕೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಗೆ ಪ್ರವೇಶ

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ನೀಟ್-2022ರ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳು ರಾಜ್ಯದ ವಿವಿಧ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ವೈದ್ಯಕೀಯ ರಂಗದ ಶೈಕ್ಷಣಿಕ ಕ್ಷೇತ್ರ ಎನಿಸಿಕೊಂಡ ಕರಾವಳಿ ಭಾಗದ ಕೆ.ಎಂ.ಸಿ ಮಂಗಳೂರು ಹಾಗೂ ಕೆ.ಎಂ.ಸಿ ಮಣಿಪಾಲ, ಬಿ.ಎಂ.ಸಿ.ಬೆಂಗಳೂರು, ಎಂ.ಎಂ.ಸಿ. ಮೈಸೂರ್, ಕಿಮ್ಸ್ ಹುಬ್ಬಳ್ಳಿ, ಸಿಮ್ಸ್ ಶಿವಮೊಗ್ಗ ಸಹಿತ ಕರ್ನಾಟಕದ ವಿವಿಧ ಮೆಡಿಕಲ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 93 ವಿದ್ಯಾರ್ಥಿಗಳಲ್ಲಿ 59 ಬಾಲಕ ಹಾಗೂ […]

ಪ್ರಥಮ ವರ್ಷದ ನೀಟ್‌ ಫಲಿತಾಂಶದಲ್ಲಿಯೇ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ 

  ಕಾರ್ಕಳ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ್‌ ಶ್ರೀಕಾಂತ್‌ ಹೆಗಡೆ 641, ಸೋಹನ್‌ ಎಸ್‌ ನೀಲಕರಿ 598, ಸುದೀಪ್‌ ಅಸಂಗಿಹಾಲ್‌ 552, ಹಾಸನದ ವಿಕಾಸ್‌ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಿರಂತರವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನಡೆಯುತ್ತಿದೆ. ಕಾಲೇಜಿನ […]